February 3, 2026

ಕಾಸರಗೋಡು: ಲಾರಿಗಳ ನಡುವೆ ಅಪಘಾತ: ಇಬ್ಬರು ಚಾಲಕರು ಗಂಭೀರ ಗಾಯ

0
image_editor_output_image836120212-1674546080128.jpg

ಕಾಸರಗೋಡು: ಲಾರಿಗಳ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಚಾಲಕರು ಗಂಭೀರ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ನಡೆದಿದೆ.

ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ತೆರಳುತ್ತಿದ್ದ ಲಾರಿ ಮತ್ತು ಇನ್ನೊಂದು ಸರಕು ಲಾರಿ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಸಿಲಿಂಡರ್ ಲಾರಿಯು ರಾಷ್ಟ್ರೀಯ ಹೆದ್ದಾರಿ ಬದಿ ಫಿಲ್ಲರ್ ನಿರ್ಮಾಣಕ್ಕೆ ತೊಡಲಾದ ಹೊಂಡಕ್ಕೆ ಬಿದ್ದಿದೆ.

ಅಪಘಾತದ ಹಿನ್ನಲೆಯಲ್ಲಿ ಕೆಲ ಸಮಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಗಾಯ ಗೊಂಡ ಚಾಲಕರನ್ನು ಕುಂಬಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಈ ಬಗ್ಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!