February 3, 2026

ಕಾರವಾರ: ಪಾಠ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಉಪನ್ಯಾಸಕಿ ಮೃತ್ಯು

0
image_editor_output_image-513895192-1674624815715.jpg

ಕಾರವಾರ: ಹೃದಯಾಘಾತದಿಂದ ಉಪನ್ಯಾಸಕಿ ಮೃತಪಟ್ಟ ಘಟನೆ ಕಾರವಾರದಲ್ಲಿ ನಡೆದಿದೆ.

ಅನುಷಾ ಶೆಟ್ಟಿ (27) ಮೃತ ಉಪನ್ಯಾಸಕಿ.

ಅನುಷಾ ಅವರು ಕಾರವಾರ ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಕಳೆದ 6 ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸಿದ್ದ ಅನುಷಾ ಪಾಠ ಮಾಡುತ್ತಿದ್ದಾಗಲೇ ಕುಸಿದು ಬಿದ್ದಿದ್ದರು ಎನ್ನಲಾಗಿದೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!