February 3, 2026

ಬೆಳ್ತಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಅಪರಾಧಿಗೆ 20 ವರ್ಷ ಶಿಕ್ಷೆ, 50 ಸಾವಿರ ರೂ. ದಂಡ

0
image_editor_output_image-59702451-1674644774531.jpg

ಬೆಳ್ತಂಗಡಿ: ಬಾಲಕಿಯ ಇಚ್ಚೆಗೆ ವಿರುದ್ದವಾಗಿ ಅನೇಕ ಲೈಂಗಿಕ ಸಂಪರ್ಕ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ 20 ವರ್ಷಗಳ ಕಾರಾಗೃಹ ಹಾಗೂ 50 ಸಾವಿರ ರೂ. ದಂಡ, ದಂಡ ಕಟ್ಟಲು ತಪ್ಪಿದಲ್ಲಿ 6 ಕಠಿಣ ಕಾರಾಗೃಹ ವಾಸ ವಿಧಿಸಿ ನ್ಯಾಯಲಯ ಆದೇಶ ಹೊರಡಿಸಿದೆ.

ಅಪರಾಧಿಯನ್ನು ಬಾಬಿ(48) ಎಂದು ಗುರುತಿಸಲಾಗಿದೆ.

ಬೆಳ್ತಂಗಡಿಯ ಎರ್ಮಳಪಲ್ಕೆ ಎಂಬಲ್ಲಿ ಆರೋಪಿಯು ಬಾಲಕಿಯ ಇಚ್ಚೆಗೆ ವಿರುದ್ದವಾಗಿ ಅನೇಕ ಲೈಂಗಿಕ ಸಂಪರ್ಕ ನಡೆಸಿದ್ದು, ಈ ಬಗ್ಗೆ ಮಾರ್ಚ್ 03, 2022 ರಂದು ಬಾಲಕಿ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ಆತನ ವಿರುದ್ದ ಫೋಕ್ಸೋ ಪ್ರಕರಣ ದಾಖಲಾಗಿತ್ತು.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ತನಿಖೆ ನಡೇಸಿರುವ ಪೊಲೀಸರು ಆರೋಪಿಯ ವಿರುದ್ದ ನ್ಯಾಯಾಲಯಕ್ಕೆ ದೋಷರೋಪಣಾ ಪತ್ರವನ್ನು ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಆರೋಪಿಯ ಆರೋಪ ಸಾಬೀತಾಗಿದ್ದು, ಇದೀಗ ಆತನಿಗೆ ಶಿಕ್ಷೆ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!