August 15, 2026

ರವಿಶಂಕರ್ ಗುರೂಜಿ ತೆರಳುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

0
IMG-20230125-WA0012.jpg

ಚೆನ್ನೈ: ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕರಾದ ರವಿಶಂಕರ್ ಗುರೂಜಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅನ್ನು ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

ಹವಾಮಾನ ವೈಪರೀತ್ಯದ ಪರಿಣಾಮ ಹೆಲಿಕಾಪ್ಟರ್ ಅನ್ನು ತಮಿಳುನಾಡಿನ ಈರೋಡ್ ಜಿಲ್ಲೆಯ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ ಬುಡಕಟ್ಟು ಗ್ರಾಮವಾದ ಉಕಿನಿಯಂನಲ್ಲಿ ಬುಧವಾರ ತುರ್ತು ಭೂಸ್ಪರ್ಶ ಮಾಡಲಾಯಿತು.

ಇನ್ನು ಹೆಲಿಕಾಪ್ಟರ್‌ನಲ್ಲಿದ್ದ ರವಿಶಂಕರ್ ಗೂರೂಜಿ ಸೇರಿದಂತೆ ಪೈಲಟ್‌ ಹಾಗೂ ಇಬ್ಬರು ಸಹಾಯಕರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!