ಪುತ್ತೂರು: ಚೆಕ್ ಅಮಾನ್ಯ ಪ್ರಕರಣ, ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ
ಪುತ್ತೂರು: ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
2013ರಲ್ಲಿ ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿ ಸಾಮೆತ್ತಡ್ಕದ ಕೇಶವ ಎಂಬವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಬಳಿಕ ಈತ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯ ಆರೋಪಿ ವಿರುದ್ಧ ವಾರಂಟ್ ಜಾರಿ ಮಾಡಿತ್ತು.
ಜ.25 ರಂದು ಪುತ್ತೂರು ನಗರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ..




