April 1, 2026

ಕಲ್ಲಡ್ಕ: ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

0
IMG-20230126-WA0011.jpg

ಬಂಟ್ವಾಳ: ದಿನಾಂಕ 26.1.2023 ರಂದು ಅನುಗ್ರಹ ಮಹಿಳಾ ಕಾಲೇಜು ಕಲ್ಲಡ್ಕದಲ್ಲಿ 74ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಹೇಮಲತಾ ಬಿ.ಡಿ ರವರು ಧ್ವಜಾರೋಹಣ ನೆರವೇರಿಸಿ ನಾವು ಸಂವಿಧಾನದ ಮೂಲಭೂತ ಹಕ್ಕುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾ ಮಾನವೀಯತೆ, ಪ್ರೀತಿ, ವಿಶ್ವಾಸದೊಂದಿಗೆ ನಮ್ಮ ರಾಷ್ಟ್ರವನ್ನು ಬಲಿಷ್ಠಗೊಳಿಸಿಕೊಳ್ಳಬೇಕು ಮತ್ತು ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಉತ್ತಮ ನಾಯಕನನ್ನು ಆರಿಸಿಕೊಳ್ಳಬಹುದು ಎಂದು ತಿಳಿಸಿದರು.

ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ ಯಾದ ಕುಮಾರಿ ಅಶ್ವಿನಿ.ಎ ಯವರು ಗಣರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಸಲಹಾ ಸಮಿತಿಯ ಕಾರ್ಯದರ್ಶಿಯಾದ ಮಮಿತಾ ಎಸ್. ರೈ ಹಾಗೂ ಸದಸ್ಯರು ಬೋಧಕ ಮತ್ತು ಬೋಧಕೇತರ ವೃಂದದವರು, ಭಾಗವಹಿಸಿದ್ದರು.
ಮೌಲ್ಯ ಶಿಕ್ಷಣ ವಿಭಾಗದ ಉಪನ್ಯಾಸಕಿಯಾದ ಶ್ರೀಮತಿ ಸಪೂರತ್ ಕಿರಾತ್ ಪಠಿಸಿ, ಹಿಂದಿ ಉಪನ್ಯಾಸಕಿಯಾದ ಶ್ರೀಮತಿ ಶ್ರುತಿ ರವರು ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!