ಸುಳ್ಯ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ
ಸುಳ್ಯ: ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ನಡೆದಿದೆ.
ಶರತ್ ಎಂಬವರ ಪತ್ನಿ ಮಲ್ಲಿಕಾ(26) ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ.
ಮೃತ ಮಹಿಳೆ ಮಲ್ಲಿಕಾ ಅವರು ಕೆ.ವಿ.ಜಿ. ಆಯುರ್ವೇದಿಕ್ ನಲ್ಲಿ ಉದ್ಯೋಗಿಯಾಗಿದ್ದರು. ನಿನ್ನೆ ರಜೆ ಹಿನ್ನಲೆ ಮಲ್ಲಿಕಾ ಮನೆಯಲ್ಲಿದ್ದರು. ಸಂಜೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ.
ಶವವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಪರೀಕ್ಷೆ ನಡೆಸಲು ತಂದಿರುವುದಾಗಿ ತಿಳಿದು ಬಂದಿದೆ.




