April 1, 2026

ಕುಂದಾಪುರ: ಬಸ್ ಫೂಟ್ ಬೋರ್ಡ್ ಮೇಲೆ ನಿಂತು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಆಯತಪ್ಪಿ ಮೃತ್ಯು

0
image_editor_output_image-72912183-1674884904087.jpg

ಕುಂದಾಪುರ: ಬಸ್ ಫೂಟ್ ಬೋರ್ಡ್ ಮೇಲೆ ನಿಂತು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಕೆಳಗೆ ಇಳಿಯುವ ಸಂದರ್ಭದಲ್ಲಿ ಆಯತಪ್ಪಿ ಖಾಸಗಿ ಬಸ್ ನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ ಘಟನೆ ಹೆಮ್ಮಾಡಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಹೆಮ್ಮಾಡಿ ಸಮೀಪದ‌ ಕಟ್ ಬೇಲ್ತೂರು ನಿವಾಸಿ, ಕೋಟೇಶ್ವರ ಕಾಗೇರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ (20) ಸಾವನ್ನಪ್ಪಿದ ದುರ್ದೈವಿ.

ಶನಿವಾರ ಬೆಳಿಗ್ಗೆ ಸಾಗರದಿಂದ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ನಲ್ಲಿ ಸುದೀಪ್ ಸಂಚರಿಸುತ್ತಿದ್ದಾಗ ಈ ಅವಘಡ ನಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!