August 13, 2026

ವಿಟ್ಲ: ಖಿನ್ನತೆಗೊಳಗಾಗಿದ್ದ ಮಹಿಳೆ ಆತ್ಮಹತ್ಯೆ

0
IMG-20230126-WA00481.jpg

ವಿಟ್ಲ: ಖಿನ್ನತೆಗೆ ಒಳಗಾದ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.

ಕೊಳ್ನಾಡು ಗ್ರಾಮದ ತೋಡ್ಲ ನಿವಾಸಿ ದಿ. ಕರುಣಾಕರ ಪೂಜಾರಿ ಯವರ ಪತ್ನಿ ಶಾಲಿನಿ(38) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಶಾಲಿನಿ ಅವರ ಪತಿ ಕೆಲ ವರ್ಷಗಳ ಹಿಂದೆ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬಳಿಕ ಇವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಇಂದು ಬೆಳಿಗ್ಗೆ ಶಾಲಿನಿಯವರು ಮನೆಯಲ್ಲಿ ತೀವ್ರ ಅಸ್ವಸ್ಥರಾಗಿದ್ದು, ಸಂಬಂಧಿಕರು ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಿದಿದ್ದು, ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಯಾವುದೋ ಮಾತ್ರೆಗಳನ್ನು ಸೇವಿಸಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ..

Leave a Reply

Your email address will not be published. Required fields are marked *

You may have missed

error: Content is protected !!