ನಾಳೆಯೊಳಗೆ ಶರಣ್ ಪಂಪ್‌ವೆಲ್ ಕ್ಷಮೆಯಾಚಿಸದಿದ್ದರೆ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ:
ಬಿರುವೆರ್ ಕುಡ್ಲ ಸಂಘಟನೆ ಎಚ್ಚರಿಕೆ
ಉಡುಪಿ: ಸಂಘಟನೆ ವಿರುದ್ದದ ಆರೋಪಕ್ಕೆ ನಾಳೆಯೊಳಗೆ ಶರಣ್ ಪಂಪ್‌ವೆಲ್ ಕ್ಷಮೆಯಾಚಿಸದಿದ್ದರೆ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ ” ಎಂಬ ಎಚ್ಚರಿಕೆಯನ್ನು ಬಿರುವೆರ್ ಕುಡ್ಲ ಸಂಘಟನೆ ನೀಡಿದೆ.
ಬಿರುವೆರ್ ಕುಡ್ಲ ಉಡುಪಿ ಘಟಕವೂ ಪತ್ರಿಕಾಗೋಷ್ಠಿ ನಡೆಸಿದ್ದು, “ಬಿರುವೆರ್ ಕುಡ್ಲ ಸಂಘಟನೆಯ ಹೆಸರನ್ನು ಕೆಡಿಸಲು ವ್ಯವಸ್ಥಿತವಾದ ಷಡ್ಯಂತ್ರ ನಡೆಯುತ್ತಿದೆ. ಸಂಘಟನೆ ಮಾಡುವ ಉತ್ತಮ ಸಮಾಜ ಸೇವೆಯನ್ನು ಕಂಡು ಸಹಿಸಲಾಗದ ಕೆಲವೊಂದು ವ್ಯಕ್ತಿಗಳು ನಮ್ಮ ಸಂಘಟನೆಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಶರಣ್ ಪಂಪ್‌ವೆಲ್ ಅವರು ಪೂರ್ಣ ಮಾಹಿತಿಯನ್ನು ತಿಳಿಯದೇ ಸಂಘಟನೆಯ ಮೇಲೆ ಆರೋಪ ಮಾಡಿ ನೋವುಂಟು ಮಾಡಿದ್ದಾರೆ. ಇದಕ್ಕಾಗಿ ಅವರು ಸಂಘಟನೆಯ ಕ್ಷಮೆಯಾಚಿಸಬೇಕು. ನಾಳೆಯ ಒಳಗೆ ಕ್ಷಮೆ ಕೇಳದೇ ಇದ್ದಲ್ಲಿ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಹೇಳಿದೆ.





