ಅಪರಿಚಿತರಿಂದ ಗುಂಡಿನ ದಾಳಿ: ಮಹಿಳೆ ಮೃತ್ಯು
ದೆಹಲಿ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿವಾಹಿತ ಮಹಿಳೆ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ದೆಹಲಿಯ ಪಶ್ಚಿಮ ವಿಹಾರದಲ್ಲಿ ಸೋಮವಾರ ಸಂಜೆ ನಡೆದಿದೆ.
ಮೃತರನ್ನು ಜ್ಯೋತಿ(32) ಎಂದು ಗುರುತಿಸಲಾಗಿದೆ.
ಫ್ಲಿಪ್‌ಕಾರ್ಟ್‌ನ ಕೊರಿಯರ್ ಇಲಾಖೆಯಲ್ಲಿ ಕೆಲಸ ಮಾಡುವ ಜ್ಯೋತಿ ಸೋಮವಾರ ಸಂಜೆ 7:30 ರ ವೇಳೆ ಕೆಲಸ ಮುಗಿಸಿ ಸ್ಕೂಟರ್ ನಲ್ಲಿ ಮನೆಗೆ ಬರುತ್ತಿದ್ದ ವೇಳೆ ಬೈಕ್ ಹಾಗೂ ಸ್ಕೂಟಿಯಲ್ಲಿ ಬಂದ ದುಷ್ಕರ್ಮಿಗಳು ಜ್ಯೋತಿ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ.




