August 13, 2026

ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ, ಖರ್ಗೆಯ ಮಗ ಡಿಕೆಶಿಯ ಮಕ್ಕಳು ಬಿಜೆಪಿಗೆ ಸೇರ್ಪಡೆ: ನಳಿನ್‌ ಕುಮಾರ್‌ ಕಟೀಲು

0
image_editor_output_image-796943689-1675137360690.jpg

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಆದರ್ಶ ಯುವಕರನ್ನು ಸೆಳೆಯುತ್ತಿದ್ದು ಮುಂದಿನ ದಿನದಲ್ಲಿ ಸಿದ್ದರಾಮಯ್ಯ ಅವರ ಮಗ, ಡಿ.ಕೆ.ಶಿವಕುಮಾರ್‌ ಅವರ ಮಕ್ಕಳು, ಖರ್ಗೆ ಅವರ ಮಗ ಬಿಜೆಪಿಗೆ ಬರುತ್ತಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಸೋಮವಾರ ಪಕ್ಷದ ಕಚೇರಿಯಲ್ಲಿ ಮೈಸೂರಿನ ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ವಾಸು ಅವರ ಪುತ್ರ ಕವೀಶ್‌ ಗೌಡ ವಾಸು ಸೇರಿ ಹಳೇ ಮೈಸೂರು ಭಾಗದ ಹಲವು ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪಕ್ಷ ಬದಲಾವಣೆ ಕೇವಲ ವಾಸು ಅವರ ಮನೆಯಲ್ಲಿ ಮಾತ್ರವಾಗಿಲ್ಲ. ಕಾಂಗ್ರೆಸ್‌ನ ಇನ್ನಿತರ ನಾಯಕರ ಮನೆಗಳಲ್ಲಿಯೂ ಬದಲಾವಣೆಯ ಗಾಳಿ ಬೀಸುತ್ತಿದೆ.

ಪರಿಣಾಮವಾಗಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಮತ್ತೆ ಡಬಲ್‌ ಎಂಜಿನ್‌ ಸರ್ಕಾರ ರಚನೆಯಾಗಲಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!