ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು: ಈಜು ತರಬೇತುದಾರನ ಬಂಧನ
ಬೆಂಗಳೂರು: ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಈಜು ಬಾರದೆ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅನ್ನಪೂರ್ಣೇಶ್ವರಿ ಲೇಔಟ್ನಲ್ಲಿ ನಡೆದಿದೆ.
ಜರಗನಹಳ್ಳಿ ನಿವಾಸಿಗಳಾದ ಜಯಂತ್(13) ಮತ್ತು ಮೋಹನ್(13) ಮೃತಪಟ್ಟ ಬಾಲಕರು.
ಸೋಮವಾರ ಮಧ್ಯಾಹ್ನ 1.30ರ ಸುಮಾರಿಗೆ ಅನ್ನಪೂರ್ಣೇಶ್ವರಿ ಲೇಔಟ್ನ ಎಂಎನ್ಸಿ ಸ್ಪೋರ್ಟ್ಸ್ ಅಕಾಡೆಮಿಯ ಈಜುಕೊಳದಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಅಕಾಡೆಮಿಯ ಈಜು ತರಬೇತುದಾರ ಮೋಯಿನ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ..