ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿ: 1 ವರ್ಷದ ಮಗು ಮೃತ್ಯು
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಾಲಾಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ ಮಗುವೊಂದು ಮೃತಪಟ್ಟ ಘಟನೆ ನಡೆದಿದೆ.
ಕಾರ್ಕಳದ ಸಂತೋಷ್ ಹಾಗೂ ಗೀತಾ ದಂಪತಿಯ ಒಂದು ವರ್ಷದ ಮಗು ಅಪಘಾತದಲ್ಲಿ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
ಇನ್ನು ಸಂಬಂಧಿಕರ ಮನೆಗೆಂದು ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಸೇತುವೆಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿದ್ದು, ಅಪಘಾತದ ತೀವ್ರತೆಗೆ ಮಗು ತಾಯಿಯ ಕೈಯಿಂದ ರಸ್ತೆಗೆ ಎಸೆಯಲ್ಪಟ್ಟು ರಿಕ್ಷಾದಲ್ಲಿದ್ದ ಮಗುವಿನ ತಾಯಿ ಗೀತಾ ಹಾಗೂ ರತ್ನ ಎಂಬವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ.
ಇನ್ನು ತಕ್ಷಣವೇ ಸ್ಥಳೀಯರ ಸಹಕಾರದೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಗು ಮೃತಪಟ್ಟಿತ್ತು ಎನ್ನಲಾಗಿದೆ.
ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.