September 19, 2024

ಬಂಟ್ಟಾಳ: ಕುಸಿದು ಬಿದ್ದು ಕುಶಲಕರ್ಮಿ ಮೃತ್ಯು

0

ಬಂಟ್ವಾಳ : ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ವೇಳೆ ಕುಶಲಕರ್ಮಿಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಂಗಳವಾರ ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಸಂಭವಿಸಿದೆ.

ಪುಂಜಾಲಕಟ್ಟೆ ನಿವಾಸಿ ಪುರುಷೋತ್ತಮ ಆಚಾರ್ಯ(66) ಮೃತಪಟ್ಟವರಾಗಿದ್ದಾರೆ.

ನೇರಳಕಟ್ಟೆಯಲ್ಲಿ ಪೀಠೋಪಕರಣ ತಯಾರಿ ಅಂಗಡಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಅವರು ಏಕಾಏಕಿ ಕುಸಿದು ಬಿದ್ದಿದ್ದರು.ತತ್‌ಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪುರುಷೋತ್ತಮ ಅವರು ಹಿಂದೆ ವಿದೇಶದಲ್ಲಿ ಉದ್ಯೋಗಲ್ಲಿದ್ದು, ಬಳಿಕ ಪುಂಜಾಲಕಟ್ಟೆ ಸ.ಪ್ರೌ.ಶಾಲೆಯಲ್ಲಿ ಕಾವಲುಗಾರರಾಗಿ ಮತ್ತು ಮಡಂತ್ಯಾರು ಗ್ರಾ.ಪಂ.ನಲ್ಲಿ ಪಂಪ್ ಆಪರೇಟರ್ ಆಗಿ ಕಾರ್ಯ ನಿರ್ವಹಿಸಿದ್ದರು.

ಮೃತರು ಪತ್ನಿ, ಅಂಗನವಾಡಿ ಕಾರ್ಯಕರ್ತೆ ಗೀತಾ ಕೆ.ಆಚಾರ್ಯ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!