September 20, 2024

ಮಾಣಿ: ಗ್ರಾಮ ಪಂಚಾಯತ್ ನ ನೂತನ ವಾಣಿಜ್ಯ ಸಂಕೀರ್ಣಕ್ಕೆ ಗುದ್ದಲಿಪೂಜೆ

0

ಮಾಣಿ: ಗ್ರಾಮದ ಅಭಿವೃದ್ಧಿ ಕಾರ್ಯಗಳ ಜೊತೆಗೆ ಪಂಚಾಯತ್ತಿನ ಆದಾಯದ ಮೂಲಗಳನ್ನು ಭದ್ರಗೊಳಿಸುವುದು ನಮ್ಮ ಮೂಲ ಉದ್ದೇಶವಾಗಿದೆ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.

ಗ್ರಾಮ ಪಂಚಾಯತ್ತಿನ ನೂತನ ವಾಣಿಜ್ಯ ಸಂಕೀರ್ಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ.ಅವರು,
ಕಳೆದ ಎರಡು ವರ್ಷಗಳಿಂದ ಪಂಚಾಯತ್ತಿನ ವ್ಯವಸ್ಥೆಗೆ ಪೂರಕವಾಗಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಹಿಂದೂರುದ್ರಭೂಮಿಯ ಕೆಲಸ ಪ್ರಗತಿಯಲ್ಲಿದ್ದು ಕೊನೆಯ ಹಂತದಲ್ಲಿದೆ. ರಸ್ತೆ, ಕುಡಿಯುವ ನೀರು, ಸ್ವಚ್ಛತೆಗೆ ಆದ್ಯತೆಯನ್ನು ನೀಡಲಾಗಿದ್ದು, ಮೂಲಭೂತ ಸೌಕರ್ಯಗಳ ಕಡೆಗೆ ಹೆಚ್ಚು ಗಮನಹರಿಸಲಾಗುತ್ತಿದೆ. ಗ್ರಾಮಸ್ಥರು ಸಹಕರಿಸಿದಲ್ಲಿ ಇನ್ನಷ್ಟು ಪ್ರಗತಿಯ ಕಾರ್ಯಗಳನ್ನು ಕೈಗೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಪ್ರಫುಲ್ಲ.ಆರ್.ರೈಯವರು, ಮಾಣಿ ಗ್ರಾಮ ಪಂಚಾಯತ್ತಿನ ಕಾರ್ಯ ಶ್ಲಾಘನೀಯ. ಇನ್ನಷ್ಟು ಕೆಲಸ ಮಾಡುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಹೇಳಿದರು.

ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಸುದೀಪ್ ಕುಮಾರ್ ಶೆಟ್ಟಿ, ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ ತೋಟ, ರಮಣಿ.ಡಿ.ಪೂಜಾರಿ, ಸೀತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ, ಗ್ರಾಮ ಕರಣಿಕರಾದ ಅನಿಲ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಮಾಣಿ, ಊರಿನ ಪ್ರಮುಖರಾದ ರಾಜ್ ಕಮಲ್ ಹೆಗ್ಡೆ, ಸುಲೈಮಾನ್ ಸೂರಿಕುಮೇರು, ಬೇಬಿ ಸುವರ್ಣ, ವಿನ್ಸೆಂಟ್ ಲಸ್ರಾದೊ, ಮಹಮ್ಮದ್ ಹನೀಫ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!