December 15, 2025

ಉಡುಪಿ: ನಾಗಬನದಲ್ಲಿ ಶ್ರೀಗಂಧ ಮರ ಕಳವು: ಆರೋಪಿ ಅರಣ್ಯ ಅಧಿಕಾರಿಗಳ ವಶಕ್ಕೆ

0
20230131_214632.jpg

ಉಡುಪಿ: ಅಂಬಲಪಾಡಿಯ ಶ್ಯಾಮಿಲಿ ಸಭಾಭವನದ ಹಿಂಬದಿ ಸಿಪಿಸಿ ಲೇಔಟ್‌ ಎಂಬಲ್ಲಿನ ನಾಗಬನದಲ್ಲಿದ್ದ ಶ್ರೀಗಂಧ ಮರ ಕಡಿಯುತ್ತಿದ್ದ ವ್ಯಕ್ತಿಯೊಬ್ಬನನ್ನು ಉಡುಪಿ ಅರಣ್ಯ ಇಲಾಖೆಯವರು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಮೂಡುಬೆಳ್ಳೆ ನಿವಾಸಿ ಅಶೋಕ ಎಂದು ಗುರುತಿಸಲಾಗಿದೆ.

ನಾಗಬನದಲ್ಲಿ ಶ್ರೀಗಂಧದ ಮರ ಕಡಿಯುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ಉಡುಪಿ ವಲಯದ ಪ್ರಭಾರ ಉಪ ವಲಯ ಅರಣ್ಯಾಧಿಕಾರಿ ಕೇಶವ ಪೂಜಾರಿ ಎಂ.ನೇತೃತ್ವದಲ್ಲಿ ಗಸ್ತು ಅರಣ್ಯ ಪಾಲಕರಾದ ಎಚ್‌.ದೇವರಾಜ ಪಾಣ, ಅಭಿಲಾಷ್‌ ಎಸ್‌.ಬಿ.ಮತ್ತು ವಿತೇಶ್‌ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನು ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!