ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: 14 ಮಂದಿ ಸಾವು
ರಾಂಚಿ: ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 14 ಮಂದಿ ಸಾವನ್ನಪ್ಪಿದ ಘಟನೆ ಜಾರ್ಖಂಡ್‍ನಲ್ಲಿ ನಡೆದಿದೆ.
ಜಾರ್ಖಂಡ್‍ನ ಧನ್‍ಬಾದ್‍ನ ಜೋರಾಫಟಕ್‍ನಲ್ಲಿರುವ 13 ಅಂತಸ್ತಿನ ಕಟ್ಟಡವೊಂದರಲ್ಲಿ ಈ ಘಟನೆ ನಡೆದಿದೆ. ಘಟನೆ ವೇಳೆ 10 ಮಹಿಳೆಯರು ಹಾಗೂ ಮೂವರು ಮಕ್ಕಳು ಸೇರಿದಂತೆ 14 ಮಂದಿ ಸಾವನ್ನಪ್ಪಿದ್ದು, 11 ಜನರು ಗಾಯಗೊಂಡಿದ್ದಾರೆ. ಅವರನ್ನೆಲ್ಲರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.





