December 18, 2025

➤➤ ಕೇಂದ್ರ ಬಜೆಟ್ UPDATES: ಕೃಷಿ ಸಾಲದ ಗುರಿಯನ್ನು 20 ಲಕ್ಷ ಕೋಟಿಗೆ ಹೆಚ್ಚಳ

0
image_editor_output_image2053658601-1675231403925.jpg

ನವದೆಹಲಿ: ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಐದನೇ ಬಾರಿಗೆ ಇಂದು ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ.

ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಒತ್ತು ನೀಡಲಾಗುವುದು. ಕೃಷಿ ಸಾಲದ ಗುರಿಯನ್ನು 20 ಲಕ್ಷ ಕೋಟಿಗೆ ಹೆಚ್ಚಿಸಲಾಗುವುದು. ಯುವ ಉದ್ಯಮಿಗಳು ಕೃಷಿ-ಸ್ಟಾರ್ಟ್‌ಅಪ್‌ಗಳನ್ನು ಆರಂಭಿಸಲು ಉತ್ತೇಜಕ ಕ್ರಮವಾಗಿ ಕೃಷಿ ವೇಗವರ್ಧಕ ನಿಧಿಯನ್ನು ಸ್ಥಾಪಿಸಲಾಗುವುದು ಅವರು ತಿಳಿಸಿದ್ದಾರೆ.

ಅಂತ್ಯೋದಯ ಯೋಜನೆಯನ್ನು 1 ವರ್ಷ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಅಂತ್ಯೋದಯ ಯೋಜನೆಯಡಿ ಡಿಸೆಂಬರ್ 2023ರವರೆಗೆ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನು ಮುಂದುವರಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!