➤➤ ಕೇಂದ್ರ ಬಜೆಟ್ UPDATES: ಆದಾಯ ತೆರಿಗೆ ಯಾವುದಕ್ಕೆ ಎಷ್ಟೆಷ್ಟು?

ನವದೆಹಲಿ: ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್ ಅವರು ಐದನೇ ಬಾರಿಗೆ ಇಂದು ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ.
ಆದಾಯ ತೆರಿಗೆ ಯಾವುದಕ್ಕೆ ಎಷ್ಟು?
0–₹3 ಲಕ್ಷದ ವರೆಗೆ: 0
₹3–₹6 ಲಕ್ಷದ ವರೆಗೆ: ಶೇ.5
₹6–₹9 ಲಕ್ಷದ ವರೆಗೆ: ಶೇ 10
₹9–₹12 ಲಕ್ಷದ ವರೆಗೆ: ಶೇ 15
₹12–₹15 ಲಕ್ಷದ ವರೆಗೆ: ಶೇ 20
₹15 ಲಕ್ಷ ಮೇಲ್ಪಟ್ಟು– ಶೇ 30
ಬರಪೀಡಿತ ಪ್ರದೇಶಗಳಲ್ಲಿ ಸುಸ್ಥಿರ ಸೂಕ್ಷ್ಮ ನೀರಾವರಿ ಒದಗಿಸುವ ಗುರಿಯನ್ನು ಹೊಂದಿರುವ ಭದ್ರಾ ಮೇಲ್ಡಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳ ಕೇಂದ್ರ ನೆರವು ನೀಡಲಾಗುವುದು.
2014ರ ನಂತರ ಆರಂಭವಾಗಿರುವ 157 ವೈದ್ಯಕೀಯ ಕಾಲೇಜುಗಳಲ್ಲಿ 157 ಹೊಸ ನರ್ಸಿಂಗ್ ಕಾಲೇಜು ಆರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಒತ್ತು ನೀಡಲಾಗುವುದು. ಕೃಷಿ ಸಾಲದ ಗುರಿಯನ್ನು 20 ಲಕ್ಷ ಕೋಟಿಗೆ ಹೆಚ್ಚಿಸಲಾಗುವುದು. ಯುವ ಉದ್ಯಮಿಗಳು ಕೃಷಿ-ಸ್ಟಾರ್ಟ್‌ಅಪ್‌ಗಳನ್ನು ಆರಂಭಿಸಲು ಉತ್ತೇಜಕ ಕ್ರಮವಾಗಿ ಕೃಷಿ ವೇಗವರ್ಧಕ ನಿಧಿಯನ್ನು ಸ್ಥಾಪಿಸಲಾಗುವುದು ಅವರು ತಿಳಿಸಿದ್ದಾರೆ.
ಅಂತ್ಯೋದಯ ಯೋಜನೆಯನ್ನು 1 ವರ್ಷ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಅಂತ್ಯೋದಯ ಯೋಜನೆಯಡಿ ಡಿಸೆಂಬರ್ 2023ರವರೆಗೆ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನು ಮುಂದುವರಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.