ಮಾಣಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಶೌಚಾಲಯ ಉದ್ಘಾಟನೆ
ಮಾಣಿ: ಮಾಣಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಶೌಚಾಲಯವನ್ನು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆಯವರು ಉದ್ಘಾಟಿಸಿದರು.
ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ.ಡಿ.ಪೂಜಾರಿ, ಅಭಿವೃದ್ಧಿ ಅಧಿಕಾರಿ ಗಿರಿಜಾ, ಶಾಲಾಭಿವೃದ್ಥಿ ಸಮಿತಿಯ ಅಧ್ಯಕ್ಷ ಹರೀಶ್ ಮಾಣಿ, ಸದಸ್ಯರು, ಮುಖ್ಯೋಪಾಧ್ಯಾಯಿನಿ ಚಂದ್ರಾವತಿ, ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು.