November 22, 2024

ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ನೀರುಪಾಲು

0

ವಿಜಯಪುರ: ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ನೀರುಪಾಲಾದ ಘಟನೆ ಮುದ್ದೇಬಿಹಾಳ ತಾಲೂಕಿನ ನಡೆದಿದೆ.

ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಬಳಿ ಕೆ.ಬಿ.ಜೆ.ಎನ್.ಎಲ್ ಕಾಲುವೆಯಲ್ಲಿ ಘಟನೆ ನಡೆದಿದೆ. ರಸೂಲ್ ಮಾಲದಾರ (25) ಹಾಗೂ ಸಮಿವುಲ್ಲಾ ಗೊಳಸಂಗಿ (10) ಮೃತ ದುರ್ದೈವಿಗಳಾಗಿದ್ದಾರೆ. ಮೃತರು ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದವರಾಗಿದ್ದಾರೆ.

ಮೃತರು ಕೂಲಿ ಕಾರ್ಮಿಕರಾಗಿದ್ದು, ಮುದ್ದೇಬಿಹಾಳದ ಚಿಕನ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹಾಗೂ ಸ್ಥಳೀಯರು ಕಾಲುವೆಯಿಂದ ಶವ ಹೊರಕ್ಕೆ ತೆಗೆದಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!