August 22, 2026

ಕಣ್ಣೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ: ದಂಪತಿ ಸಜೀವ ದಹನ

0
image_editor_output_image-1877591567-1675336777985.jpg

ಕಣ್ಣೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ದಂಪತಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಗುರುವಾರ ಇಲ್ಲಿನ ಜಿಲ್ಲಾ ಆಸ್ಪತ್ರೆ ಸಮೀಪ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಕಾರಿನಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದರು. ಬೆಂಕಿ ಹೊತ್ತಿಕೊಂಡಾಗ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಗು ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮುಂದಿನ ಸೀಟಿನಲ್ಲಿ ಕುಳಿತಿದ್ದ ದಂ‍ಪತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದುರ್ಘಟನೆಯಲ್ಲಿ 35 ವರ್ಷದ ಪುರುಷ ಮತ್ತು 26 ವರ್ಷದ ಗರ್ಭಿಣಿ ಮಹಿಳೆ ಮೃತಪಟ್ಟಿದ್ದಾರೆ. ಗರ್ಭಿಣಿ ಮಹಿಳೆ ತಪಾಸಣೆಗಾಗಿ ಜಿಲ್ಲಾ ಆಸ್ಪತ್ರೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ

Leave a Reply

Your email address will not be published. Required fields are marked *

You may have missed

error: Content is protected !!