ಟ್ರಾಫಿಕ್ ಜಾಮ್: ಆ್ಯಂಬುಲೆನ್ಸ್ ನಲ್ಲಿದ್ದ ಮಗು ಮೃತ್ಯು
ಬೆಂಗಳೂರು: ಟ್ರಾಫಿಕ್ ಜಾಮ್ ನಿಂದ ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ನೆಲಮಂಗಲದ ಬಳಿ ನಡೆದಿರುವುದಾಗಿ ವರದಿಯಾಗಿದೆ.
ಅಪಘಾತದಲ್ಲಿ ಗಾಯಗೊಂಡಿದ್ದ ಒಂದೂವರೆ ವರ್ಷದ ಮಗು ಹುದಾ ಕೌಸರ್ ನೆಲಮಂಗಲ ಬಳಿ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಹೋಗಲಾಗದೆ ಚಿಕಿತ್ಸೆ ಪಡೆಯಲಾಗದೆ ಮೃತಪಟ್ಟಿದೆ.
ಅಹಮದ್, ರುಕ್ಸಾನಾ ದಂಪತಿಯ ಪುತ್ರಿ ಹುದಾ ಕೌಸರ್, ನಿನ್ನೆ ತುಮಕೂರು ಜಿಲ್ಲೆಯ ತಿಪಟೂರಿನ ಕೈಮರಾ ಬಳಿ ಬುಲೆರೋ ವಾಹನ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡಿದ್ದಳು.