ಡಿ.ಕೆ.ಶಿವಕುಮಾರ್, ನಟ ಕಿಚ್ಚ ಸುದೀಪ್ ಭೇಟಿಯ ಫೋಟೊ ವೈರಲ್: ರಾಜಕೀಯ ಎಂಟ್ರಿಯ ಬಗ್ಗೆ ಚರ್ಚೆ
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದಿಢೀರ್ ಅಂತ ಕಿಚ್ಚ ಸುದೀಪ್ ಮನೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.
ಮೊನ್ನೆಯಷ್ಟೇ ನಟಿ ರಮ್ಯಾ ಮೂಲಕ ಸುದೀಪ್ ಅವರನ್ನು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆದಿದೆ ಎನ್ನುವ ಸುದ್ದಿ ಹರಡಿತ್ತು. ಈ ಬೆನ್ನಲ್ಲೇ ಕ್ರಾಂಗೆಸ್ ಪಕ್ಷದ ಅಧ್ಯಕ್ಷರು ಸುದೀಪ್ ಮನೆಗೆ ಹೋಗಿರುವುದು ಮತ್ತೊಂದು ಸುತ್ತಿನ ಚರ್ಚೆಗೆ ಕಾರಣವಾಗಿದೆ.




