July 6, 2026

ಹಾರಾಟ ನಡೆಸುತ್ತಿದ್ದ ವೇಳೆ ಏರ್ ಇಂಡಿಯಾ ವಿಮಾನದ ಇಂಜಿನ್ ನಲ್ಲಿ ಬೆಂಕಿ ಅವಘಡ: ತುರ್ತು ಭೂ ಸ್ಪರ್ಶ

0
Air-india-express-2.jpg

ಅಬುಧಾಬಿ: ಹಾರಟ ನಡೆಸುತ್ತಿದ್ದ ವೇಳೆ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವೊಂದು ತುರ್ತು ಭೂ ಸ್ಪರ್ಶ ಮಾಡಿದೆ.

ಅಬುಧಾಬಿಯಿಂದ ಕೇರಳದ ಕಲ್ಲಿಕೋಟೆಗೆ ತೆರಳುತ್ತಿದ್ದ ವಿಮಾನ ಅಬುಧಾಬಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ್ದು, ಎಲ್ಲ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ.

ವಿಮಾನ 1000 ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿದ್ದಾಗ ವಿಮಾನದ ಒಂದು ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಪೈಲಟ್ ವಿಮಾನವನ್ನು ತುರ್ತು ಭೂ ಸ್ಪರ್ಶ ಮಾಡಿದ್ದಾರೆ. ವಿಮಾನದಲ್ಲಿ 184 ಪ್ರಯಾಣಿಕರಿದ್ದರು. ವಿಮಾನ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!