February 2, 2026

ಮಂಗಳೂರು: ಅಪಘಾತದಲ್ಲಿ ಇಬ್ಬರು ಮೃತಪಟ್ಟ ಪ್ರಕರಣ: ತುಳು ಸ್ಟಾಂಡ್ ಆಫ್ ಕಾಮಿಡಿಯನ್ ಅರ್ಪಿತ್ ಬಂಧನ

0
n468313624167548488463802af62634f2d3a249bf8a16193be774d17b727f7af7e2621148d18dc45b88188.jpg

ಮಂಗಳೂರು: ಕಾರು ಡಿಕ್ಕಿಯಾಗಿ ಇಬ್ಬರ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ Mad In Kudla ಖ್ಯಾತಿಯ ತುಳು ಸ್ಟ್ಯಾಂಡ್ ಆಫ್ ಕಾಮಿಡಿಯನ್ ಅರ್ಪಿತ್ ಅವರನ್ನು ಬಂಧಿಸಲಾಗಿದೆ.

ಮಂಗಳೂರು ಹೊರ ವಲಯದ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಕಾರು ಢಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿ, ಓರ್ವ ಗಂಭೀರ ಗಾಯಗೊಂಡಿದ್ದ. ಘಟನೆಯ ಬಳಿಕ ಪರಾರಿಯಾಗಿದ್ದ ಆರೋಪಿ ಕಾರು ಚಾಲಕ ಅರ್ಪಿತ್ ಅವರನ್ನು ಉತ್ತರ ಟ್ರಾಫಿಕ್ ಪೊಲೀಸರು ಕಾರು ಸಮೇತ ಬಂಧಿಸಿದ್ದಾರೆ ಎನ್ನಲಾಗಿದೆ.

ಮಧ್ಯಪ್ರದೇಶದ ಇಂದೋರ್‌ನಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿಯೊಂದರ ಟಯರ್ ಪಡುಪಣಂಬೂರು ಬಳಿ ಪಂಕ್ಚರ್ ಆಗಿತ್ತು. ಲಾರಿಯಲ್ಲಿದ್ದ ಮಧ್ಯಪ್ರದೇಶ ನಿವಾಸಿಗಳಾದ ಬಬುಲು(23), ಆಚಲ್ ಸಿಂಗ್ (30) ಹಾಗೂ ಕೇರಳ ನಿವಾಸಿ ಅನೀಶ್(42) ಎಂಬವರು ಕೆಳಗಿಳಿದು ಹೆದ್ದಾರಿ ಬದಿಯಲ್ಲಿ ಟಯರ್ ತೆಗೆದು ಸರಿ ಮಾಡುತ್ತಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗದಿಂದ ಬಂದ ಕಾರು ಲಾರಿಯ ಟಯರ್ ದುರಸ್ತಿ ಮಾಡುತ್ತಿದ್ದ ಮೂವರಿಗೆ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ತನಿಖೆ ನಡೆಸಿ ಆರೋಪಿ ಅರ್ಪಿತ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!