ದೂರು ದಾಖಲಿಸಬೇಕಾದರೆ 2 ಲಕ್ಷ ರೂ. ಲಂಚದ ಬೇಡಿಕೆ: 1 ಲಕ್ಷ ರೂ. ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಇನ್ ಸ್ಪೆಕ್ಟರ್
ರಾಯಚೂರು : ರಾಯಚೂರು ಜಿಲ್ಲೆಯ ದೇವದುರ್ಗ ಹಾಗೂ ಮಾನ್ವಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರವೊಬ್ಬರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪೊಲೀಸ್ ಇನ್ಸ್ಪೆಕ್ಟರ್ ಬಸವರಾಜ ಕಾಕರಗಲ್ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಸಿರವಾರದಲ್ಲಿರುವ ವೈನ್ ಶಾಪ್ ಮೇಲೆ ಯಾವುದೇ ದೂರು ದಾಖಲಿಸದಿರುವುದಕ್ಕೆ 2 ಲಕ್ಷ ರೂಪಾಯಿಗೆ ಇನ್ಸ್ಪೆಕ್ಟರ್ ಬಸವರಾಜ ಅವರು ಬೇಡಿಕೆ ಇಟ್ಟಿದ್ದರು. ಅದರಂತೆ 1 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.
ಲೋಕಾಯುಕ್ತ ಇನ್ಸ್ಪೆಕ್ಟರ್ ನಾಗರಾಜ ಮೇಕಾ ನೇತೃತ್ವದಲ್ಲಿ ದಾಳಿ ನಡೆದಿದೆ. ಸದ್ಯ ಇನ್ಸ್ಪೆಕ್ಟರ್ ಬಸವರಾಜ ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿ ವಿಚಾರಣೆಗೆ ಒಳಪಡಿಸಿದ್ದಾರೆ.




