February 2, 2026

ನಿಷೇಧಿತ ಔಷಧಿ ಬಳಕೆ: ಭಾರತದ ಖ್ಯಾತ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಗೆ 21 ತಿಂಗಳು ಅಮಾನತು ಶಿಕ್ಷೆ

0
Screenshot_2023-02-04-10-43-02-74_680d03679600f7af0b4c700c6b270fe7.jpg

ನವದಹೆಲಿ: ಭಾರತದ ಖ್ಯಾತ ಜಿಮ್ನಾಸ್ಟ್ ದೀಪಾ ಕರ್ಮಾಕರ್ ನಿಷೇಧಿತ ವಸ್ತು ಬಳಸಿರುವುದು ಸಾಬೀತಾಗಿದೆ.

ಕರ್ಮಾಕರ್ ವಿಶ್ವ ಡೋಪಿಂಗ್ ಎಜೆನ್ಸಿ ನಿಷೇಧಿತ ವಸ್ತುಗಳಲ್ಲಿ ಸೇರಿಸಿರುವ ಹಿಜನಮೈನ್(S3. ಬೀಟಾ-2 ಅಗೊನಿಸ್ಟ್‌) ಸೇವಿಸಿರುವುದು ಡೋಪಿಂಗ್ ಟೆಸ್ಟ್‌ನಲ್ಲಿ ಸಾಬೀತಾಗಿದೆ.

ಕರ್ಮಾಕರ್ ವರದಿ ಪಾಸಿಟೀವ್ ಬಂದಿದೆ. ಹೀಗಾಗಿ ಅಂತಾರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ITA) ದೀಪಾ ಕರ್ಮಾಕರ್ ಶಿಕ್ಷೆ ಪ್ರಕಟಿಸಿದೆ. 21 ತಿಂಗಳ ಕಾಲ ಯಾವುದೇ ಕ್ರೀಡೆಯಲ್ಲಿ ಪಾಲ್ಗೊಳ್ಳದಂತೆ ಅಮಾನತು ಶಿಕ್ಷೆ ವಿಧಿಸಿದೆ.

2021ರ ಅಕ್ಟೋಬರ್ 11 ರಂದು ದೀಪಾ ಕರ್ಮಾಕರ್ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಫಲಿತಾಂಶ ಹೊರಬಿದ್ದಿತ್ತು.

ಇದೀಗ ಶಿಕ್ಷೆ ಪ್ರಮಾಣ ಪ್ರಕಟಗೊಂಡಿದೆ. ಇಷ್ಟೇ ಅಲ್ಲ ಅಕ್ಟೋಬರ್ 11, 2021ರಂದು ದೀಪಾ ಕರ್ಮಾಕರ್ ಪಾಲ್ಗೊಂಡ ಕ್ರೀಡೆ ಫಲಿತಾಂಶಗಳನ್ನ ಅನರ್ಹಗೊಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!