March 20, 2026

ಸೌದಿ ಅರೇಬಿಯಾ: ಭೀಕರ ರಸ್ತೆ ಅಪಘಾತ: ಮಂಗಳೂರಿನ ಮೂವರು ಸೇರಿ ನಾಲ್ವರು ಮೃತ್ಯು

0
IMG-20230204-WA0004.jpg

ರಿಯಾದ್: ಸೌದಿ ಅರೇಬಿಯಾದಲ್ಲಿ ನಿನ್ನೆ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಮೃತರನ್ನು ಮಂಗಳೂರಿನ ಬೋಳಾರ್ ನಿವಾಸಿ ಅಕೀಲ್ , ಹಳೆಯಂಗಡಿ ಕದಿಕೆ ನಿವಾಸಿ ರಿಝ್ವಾನ್ , ಶಿಹಾಬ್ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ನಾಲ್ವರು ಕಾರಿನಲ್ಲಿ ಹೋಗುತ್ತಿದ್ದಾಗ ಖುರೈಸ್ ರಸ್ತೆಯ ಬಳಿ ಒಂಟೆಗೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿದ್ದವರು SAQCO ಎಂಬ ಕಂಪನಿಯಲ್ಲಿ ನೌಕರರಾಗಿದ್ದರು. ಕಾರಿನಲ್ಲಿದ್ದ ಓರ್ವ ಬಾಂಗ್ಲಾದೇಶದ ಯುವಕ ಕೂಡ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮೃತದೇಹಗಳನ್ನು ಅಲ್ ಹಸ್ಸಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸಂತ್ರಸ್ತ ಕುಟುಂಬವನ್ನು ಸಂಪರ್ಕಿಸಿ ಮಾಹಿತಿ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!