KPCC ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಕಾಂಗ್ರೆಸ್ ವಿರುದ್ಧವೇ ಅವಹೇಳನಕಾರಿ ಪೋಸ್ಟ್: ದೂರು ದಾಖಲು
ಬೆಂಗಳೂರು: KPCC ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಕಾಂಗ್ರೆಸ್ ವಿರುದ್ಧವೇ ಅವಹೇಳನಕಾರಿ ಬರಹಗಳನ್ನು ಬರೆದು ಪೋಸ್ಟ್ ಮಾಡಿರುವ ಘಟನೆ ನಡೆದಿದೆ. ಕೆಪಿಸಿಸಿ ಘಟಕದ ಸದಸ್ಯ ಶತಬೀಶ್ ಶಿವಣ್ಣ ದೂರು ಸಲ್ಲಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಹಸ್ತದ ಗುರುತನ್ನ ಬಳಸಿಕೊಂಡು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಖಾತೆ ಸೃಷ್ಟಿಸಿ ಅದರಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರನ್ನು ಅವಹೇಳನ ಮಾಡಿ ಪೋಸ್ಟ್ಗಳನ್ನು ಹಾಕಿದ್ದಾರೆ.
ನಕಲಿ ವೆಬ್ ಸೈಟ್ನಲ್ಲಿ ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿರುವ ಹಿನ್ನೆಲೆ ಕೆಪಿಸಿಸಿ ಕಾನೂನು ಘಟಕದಿಂದ ಸೈಬರ್ ಠಾಣೆಗೆ ದೂರು ನೀಡಲಾಗಿದೆ.
ಕೆಪಿಸಿಸಿ ಘಟಕದ ಸದಸ್ಯ ಶತಬೀಶ್ ಶಿವಣ್ಣ ದೂರು ಸಲ್ಲಿಸಿದ್ದಾರೆ.





