March 20, 2026

ಉಡುಪಿ: ಚೂರಿಯಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

0
IMG-20230205-WA0041.jpg

ಉಡುಪಿ: ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಲೆಗೈದಿರುವ ಘಟನೆ ಪಾಂಗಾಳದಲ್ಲಿ ಭಾನುವಾರ ಸಂಜೆ ನಡೆದಿದೆ.

ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ(39) ಹತ್ಯೆಗೀಡಾದ ವ್ಯಕ್ತಿ.

ಪಾಂಗಾಳ ಶ್ರೀ ಜನಾರ್ದನ ದೇವಸ್ಥಾನದ ಬಳಿಯ ಅಂಗಡಿಯ ಬಳಿಯೊಂದರಲ್ಲಿ ಕೃತ್ಯ ನಡೆದಿದ್ದು, ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ‌ ಬಿದ್ದಿದ್ದ ಯುವಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.

ಇನ್ನು ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ, ಕಾಪು ಎಸ್ಸೈ ಸುಮ ಬಿ., ಕ್ರೈಂ ಎಸ್ಸೈ ಭರತೇಶ್ ಕಂಕಣವಾಡಿ ಸಹಿತ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಶರತ್ ಶೆಟ್ಟಿ ಭೂ ವ್ಯವಹಾರ ನಡೆಸಿಕೊಂಡಿದ್ದು, ಭೂ ವ್ಯವಹಾರದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

error: Content is protected !!