ಶಾಹಿ ಈದ್ಗಾ ಮಸೀದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಸರಕಾರ
ಲಖನೌ: ಅಕ್ರಮವಾಗಿ ವಿದ್ಯುತ್ ಸಂಪರ್ಕ ಹೊಂದಿರುವುದಾಗಿ ಆರೋಪಿಸಿ ಎಫ್‌ಐಆರ್ ದಾಖಲಿಸಲಾಗಿದ್ದು, ಮಥುರಾದ ಶಾಹಿ ಈದ್ಗಾ ಮಸೀದಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ.
ಶಾಹಿ ಈದ್ಗಾ ಮಸೀದಿ ಸಮಿತಿಯ ಕಾರ್ಯದರ್ಶಿ ತನ್ವೀರ್ ಅಹ್ಮದ್ ಅವರಿಂದ ದಂಡವನ್ನೂ ವಸೂಲಿ ಮಾಡಲಾಗಿದೆ.
ಅಕ್ರಮ ವಿದ್ಯುತ್ ಸಂಪರ್ಕದ ವಿರುದ್ಧ ರಾಜ್ಯದಲ್ಲಿ ನಡೆಯುತ್ತಿರುವ ಅಭಿಯಾನದ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.





