December 16, 2025

ಸೆಲ್ಫಿ ವೀಡಿಯೋ ಮಾಡಿ ಯುವಕ ಆತ್ಮಹತ್ಯೆ

0
image_editor_output_image1906968222-1675666474368.jpg

ರಾಮನಗರ: ಸಾಲಗಾರರ ಕಿರುಕುಳ ತಾಳಲಾರದೆ ಸೆಲ್ಫಿ ವೀಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರಿನ ವಾಸುದೇವನಪುರದಲ್ಲಿ ಹೇರ್ ಸಲೂನ್ ನಡೆಸುತ್ತಿದ್ದ ಶಿವರಾಜ್ (33) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಫೆ.3ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸ್ನೇಹಿತರಿಗೆ ಸಾಲಕ್ಕೆ ಜಾಮೀನು ನೀಡಿದ್ದ ಶಿವರಾಜ್‌ಗೆ ಪ್ರತಿ ವಾರ ಬಡ್ಡಿ ನೀಡುವಂತೆ ಸಾಲಗಾರರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!