February 3, 2026

ಬೆಂಗಳೂರಿನ ರಿಂಗ್ ರಸ್ತೆಗೆ ಡಾ.ಪುನೀತ್ ರಾಜಕುಮಾರ್ ಹೆಸರು

0
IMG-20230206-WA0027.jpg

ಬೆಂಗಳೂರು: ಬೆಂಗಳೂರಿನ ರಿಂಗ್ ರಸ್ತೆಗೆ ಡಾ.ಪುನೀತ್ ರಾಜಕುಮಾರ್ ಹೆಸರಿಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಮಂಗಳವಾರ ಬೃಹತ್ ಕಾರ್ಯಕ್ರಮ ನಡೆಯಲಿದೆ.

ಈ ಕುರಿತು ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಮೈಸೂರು ರಸ್ತೆಯಿಂದ ನಾಯಂಡಹಳ್ಳಿ ಜಂಕ್ಷನ್ ಹಾಗೂ ಬನ್ನೇರುಘಟ್ಟವರೆಗಿನ 12ಕಿಲೋ ಮೀಟರ್ ಡಬಲ್ ರಸ್ತೆಗೆ ‘ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಹೆಸರು ಇಡಲು ನಿರ್ಧರಿಸಲಾಗಿದ್ದು, ಮಂಗಳವಾರ ಸಂಜೆ ಬೃಹತ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರು ನಾಮಕರಣ ಮಾಡಲಿದ್ದಾರೆ ಎಂದರು.

ಇನ್ನು ಪವರ್ ಸ್ಟಾರ್ ದಿ.ಡಾ.ಪುನೀತ್ ರಾಜಕುಮಾರ್ ಅವರ ಹೆಸರು ಚಿರಸ್ಥಾಯಿಯಾಗುವಂತೆ ಮಾಡಲು ಈ ನೀರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!