July 6, 2026

ಮಂಗಳೂರು: ವಿಷಾಹಾರ ಸೇವನೆ:
ನರ್ಸಿಂಗ್ ಕಾಲೇಜಿನ 100ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

0
WhatsApp-Image-2023-02-06-at-10.09.57-PM-1-1068x481.jpeg

ಮಂಗಳೂರು: ಮಂಗಳೂರಿನ ಶಕ್ತಿನಗರದಲ್ಲಿರುವ ಖಾಸಗಿ ಆಸ್ಪತ್ರೆಯ ಸಿಟಿ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್‌ ನಲ್ಲಿ ವಿಷಾಹಾರ ಸೇವನೆಯಿಂದ 100 ಕ್ಕೂ ಅಧಿಕ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದು, ಕೆಎಂಸಿ, ಸಿಟಿ ಆಸ್ಪತ್ರೆ ಸೇರಿ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಕೆಲವರ ಪರಿಸ್ಥಿತಿ ಗಂಭಿರವಾಗಿದೆ ಎಂದು ತಿಳಿದು ಬಂದಿದೆ.

ವಿಷಾಹಾರ ಸೇವನೆಯ ವಿದ್ಯಾರ್ಥಿನಿಯರನ್ನು ದಾಖಲು ಮಾಡಿದ ಸಿಟಿ ಆಸ್ಪತ್ರೆ ಬಳಿ ಭಾರಿ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿ ಕುಮಾರ್, ಡಿಸಿಪಿಗಳು ಮತ್ತಿತರ ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದು ವಿಚಾರಣೆ ಮಾಡುತ್ತಿದ್ದಾರೆ.

ವಿಷಾಹಾರ ಸೇವನೆಯ ಕಾರಣ ಇನ್ನು ಕೂಡ ಸ್ಪಷ್ಟವಾಗಿಲ್ಲ ಈ ಬಗ್ಗೆ ಪೊಲೀಸರು ವಿವಿಧ ತಜ್ಞರೊಂದಿಗೆ ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!