ಆಸ್ಟ್ರೇಲಿಯಾ T20 ತಂಡದ ನಾಯಕ ಆರನ್ ಫಿಂಚ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ
ಕ್ಯಾನ್ಬೆರಾ: ಆಸ್ಟ್ರೇಲಿಯಾ T20 ತಂಡದ ನಾಯಕನಾಗಿದ್ದ ಆರನ್ ಫಿಂಚ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡುವ ಮೂಲಕ 12 ವರ್ಷಗಳ ತಮ್ಮ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ.
ಇಂಗ್ಲೆಂಡ್ ವಿರುದ್ಧ 2011ರಲ್ಲಿ ನಡೆದ ಟಿ20 ಕ್ರಿಕೆಟ್ ಮೂಲಕ ಅಂತಾರಾಷ್ಟ್ರೀಯ (T20I) ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಫಿಂಚ್ ಇಲ್ಲಿಯವರೆಗೆ 254 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.
ಈವರೆಗೆ 8,804 ರನ್‌ಗಳನ್ನು ಸಿಡಿಸಿದ್ದಾರೆ. ಇದರಲ್ಲಿ 19 ಶತಕ ಹಾಗೂ 172 ಅರ್ಧ ಶತಕಗಳೂ ಸೇರಿವೆ. 103 ಟಿ20 ಪಂದ್ಯಗಳಾಡಿರುವ ಅವರು, 76 ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಿದ್ದಾರೆ. ಅಲ್ಲದೇ ದೀರ್ಘಾವದಿಯ ವರೆಗೆ ವೈಟ್ ಬಾಲ್ ಪಂದ್ಯವನ್ನು ಮುನ್ನಡೆಸಿದ ಆಸ್ಟ್ರೇಲಿಯಾ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.




