February 3, 2026

ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಮ್ಸ್ ಆಸ್ಪತ್ರೆಗೆ ದಾಖಲು

0
Screenshot_2023-02-07-11-31-09-51_680d03679600f7af0b4c700c6b270fe7.jpg

ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರಿಗೆ ನ್ಯುಮೋನಿಯಾ ಮತ್ತು ತೀವ್ರ ಜ್ವರ ಕಾಣಿಸಿಕೊಂಡಿದ್ದು, ಸೋಮವಾರ ಸಂಜೆ ತಿರುವನಂತಪುರಂನಲ್ಲಿರುವ ನೂರುಲ್ ಇಸ್ಲಾಂ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ನಿಮ್ಸ್)ಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಬಗ್ಗೆ ಉಮ್ಮನ್ ಚಾಂಡಿ ಅವರ ಮಗ ಫೇಸ್‌ಬುಕ್ ಲೈವ್ ವಿಡಿಯೋ ಮಾಡಿದ್ದು, 79 ವರ್ಷದ ಉಮ್ಮನ್ ಚಾಂಡಿ ನ್ಯುಮೋನಿಯಾ ಮತ್ತು ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರೆ ಮಾಡಿ ನಮ್ಮ ತಂದೆಯ ಆರೋಗ್ಯ ವಿಚಾರಿಸಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!