ಮಂಗಳೂರು: ಕಲುಷಿತ ಆಹಾರ ಸೇವನೆ: ಸಿಟಿ ಆಸ್ಪತ್ರೆ, ಕಾಲೇಜು ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ FIR ದಾಖಲು
ಮಂಗಳೂರು: ಕಲುಷಿತ ಆಹಾರ ಸೇವನೆಯಿಂದ ನಗರದ ನರ್ಸಿಂಗ್ ಕಾಲೇಜೊಂದರ 173 ಮಂದಿ ವಿದ್ಯಾರ್ಥಿನಿಯರು ಸೋಮವಾರ ಅಸ್ವಸ್ಥಗೊಂಡಿದ್ದು, ಈ ಸಂಬಂಧ ಸಿಟಿ ಆಸ್ಪತ್ರೆಯ ವಿರುದ್ಧ ಡಾ.ಜಗದೀಶ್ ನೀಡಿರುವ ದೂರಿನ ಅನ್ವಯ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೇತರಿಕೆ: ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಪ್ರಭಾರ) ಡಾ. ರಾಜೇಶ್ ತಿಳಿಸಿದರು.
‘ಶಕ್ತಿನಗರದ ಹಾಸ್ಟೆಲ್‌ನಲ್ಲಿ ವಾಸವಿದ್ದ ವಿದ್ಯಾರ್ಥಿನಿಯರು ಸೇವಿಸಿದ್ದ ಆಹಾರ ಪದಾರ್ಥಗಳ ಮಾದರಿಗಳನ್ನು ಪರೀಕ್ಷೆಗಾಗಿ ಮೈಸೂರಿನ ಆಹಾರ ಸುರಕ್ಷತಾ ಸಂಸ್ಥೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.




