ಬಾಲಕಿಯ ಖಾಸಗಿ ದೃಶ್ಯವನ್ನು ಸೆರೆ ಹಿಡಿಯಲು ಯತ್ನ: ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು
ಕೇರಳ: ಬಾಲಕಿ ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಸೆರೆ ಹಿಡಿಯಲು ಯತ್ನಿಸಿದ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಕೇರಳದ ಹರಿಪ್ಪಾಡ್ ಎಂಬಲ್ಲಿ ಘಟನೆ ನಡೆದಿದ್ದು ತ್ರಿಕುನ್ನಪುಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕಾರ್ತಿಕಪ್ಪಲ್ಲಿಯ ಅನಿಲ್ (34) ಬಂಧಿತ ಆರೋಪಿ. ಬಾಲಕಿ ಸ್ನಾನ ಮಾಡುತ್ತಿದ್ದಾಗ ಕಾಮುಕ ಮೊಬೈಲ್‌ನಲ್ಲಿ ಫೋಟೋ ಕ್ಲಿಕ್ಕಿಸಲು ಮುಂದಾಗಿದ್ದಾನೆ.
ಈ ವೇಳೆ ಬಾಲಕಿ ಇದನ್ನು ಗಮನಿಸಿ ಕಿರುಚಿದ್ದಾಳೆ. ಕೂಡಲೇ ಸ್ಥಳೀಯರು ಆತನನ್ನು ತರಾಟೆಗೆ ತೆಗೆದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ.




