March 20, 2026

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ 150 ಅಡಿ ಆಳಕ್ಕೆ ಉರುಳಿ ಬಿದ್ದ ಗೂಡ್ಸ್ ಟೆಂಪೋ: ತಪ್ಪಿದ ಅನಾಹುತ

0
IMG-20230207-WA0032.jpg

ಬೆಳ್ತಂಗಡಿ : ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ಪ್ರಪಾತಕ್ಕೆ ಬಿದ್ದ ಘಟನೆ ನಡೆದಿದೆ..

ದಾವಣಗೆರೆ ಮೂಲದ ಗೂಡ್ಸ್ ವಾಹನ ಚಾರ್ಮಾಡಿ ಘಾಟ್ ಕಡೆಯಿಂದ ಬೆಳ್ತಂಗಡಿಗೆ ಕಡೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿ 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿದೆ.

ಇನ್ನು ಘಟನೆಯಲ್ಲಿ ವಾಹನದ ಚಾಲಕ ಸೇರಿ ಇಬ್ಬರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.

ಈ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!