February 3, 2026

ಬಂಟ್ವಾಳ: ಅನಾರೋಗ್ಯದಲ್ಲಿದ್ದ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

0
IMG-20230207-WA0046.jpg

ಬಂಟ್ವಾಳ: ವೃದ್ದೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ‌ಪೋಲೀಸ್ ಠಾಣಾ ವ್ಯಾಪ್ತಿಯ ಕಡೇಶಿವಾಲಯ ಎಂಬಲ್ಲಿ ನಡೆದಿದೆ. ಕಡೇಶಿವಾಲಯ ಗ್ರಾಮದ ಗುಜುರುಕ್ಕು ನಿವಾಸಿ ಚೋಮು(63) ಮೃತ ಮಹಿಳೆ.

ಇವರು ಆಸ್ತಮಾ ರೋಗದಿಂದ ಬಳಲುತ್ತಿದ್ದು, ಅಸ್ತಮಾ ಉಲ್ಬಣಗೊಂಡಾಗ ಸಹಿಸಲು ಆಗುವುದಿಲ್ಲ ಸಾಯುತ್ತೇನೆ ಎಂದು ಅನೇಕ ಬಾರಿ ನೆರೆಮನೆಯವರಲ್ಲಿ ಹಾಗೂ ಸಂಬಂಧಿಕರಲ್ಲಿ ಹೇಳಿಕೊಂಡಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಇದೇ ಕಾರಣವಿರಬಹುದು ಎಂದು ಶಂಕಿಸಲಾಗಿದ್ದು, ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.

ಬಂಟ್ವಾಳ ಗ್ರಾಮಾಂತರ ಎಸ್.ಐ.ಉದಯರವಿ ಅವರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!