February 3, 2026

ಕುಂದಾಪುರ ನಗರ ಠಾಣೆಯ ಕಾನ್‌ಸ್ಟೇಬಲ್‌ ಬೀಚ್‌ ಬಳಿ ಆತ್ಮಹತ್ಯೆ

0
image_editor_output_image-1796360445-1675834924382.jpg

ಕುಂದಾಪುರ: ಕುಂದಾಪುರ ನಗರ ಠಾಣೆಯ ಕಾನ್‌ಸ್ಟೇಬಲ್‌ವೊಬ್ಬರು ಹೊನ್ನಾವರ ತಾಲೂಕಿನ ಕಾಸರಕೋಡು ಇಕೋ ಬೀಚ್‌ ಬಳಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ನಾಡು ಮಾಸ್ಕೇರಿ ಗ್ರಾಮದ ನಾಗೇಶ ಗೌಡ ಅವರ ಪುತ್ರ ರಾಮ ಗೌಡ (32) ಆತ್ಮಹತ್ಯೆಗೆ ಶರಣಾದವರು.

ಕಳೆದ 5 ವರ್ಷಗಳಿಂದ ಕುಂದಾಪುರ ಠಾಣೆಯಲ್ಲಿ ಕಾನ್‌ಸ್ಟೆಬಲ್‌ ಆಗಿದ್ದರು. ಮಂಗಳವಾರ ಘಟನೆ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಕುಂದಾಪುರ ಎಸ್‌ಐ ಈರಯ್ಯ ಹಾಗೂ ಸಿಬಂದಿ ಭೇಟಿದ್ದು, ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಗೆ ಅನಾರೋಗ್ಯ ಅಥವಾ ಆನ್‌ಲೈನ್ ಬೆಟ್ಟಿಂಗ್‌ನಿಂದಾಗಿ ಉಂಟಾದ ಆರ್ಥಿಕ ಸಂಕಷ್ಟ ಕಾರಣ ಎಂಬ ಶಂಕೆ ಮೂಡಿದೆ.

Leave a Reply

Your email address will not be published. Required fields are marked *

error: Content is protected !!