March 26, 2026

ಚಾರ್ಮಾಡಿ ಘಾಟ್‌‌ನಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಡವೆ ಬಲಿ

0
IMG-20230208-WA0037.jpg

ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಬುಧವಾರ ನಡೆದಿದೆ.

ಚಾರ್ಮಾಡಿ ಘಾಟ್‌ನ ಮಲಯಮಾರುತದ ಬಳಿ ಹೆದ್ದಾರಿ ಬದಿಯ ಚರಂಡಿಯಲ್ಲಿ ಕಡವೆ ಮೃತದೇಹ ಪತ್ತೆಯಾಗಿದ್ದು, ಶಿಕಾರಿ ಮಾಡುವವರ ಗುಂಡಿಗೆ ಕಡವೆ ಬಲಿಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ವಾಹನ ಚಾಲಕರು ಕಡವೆ ಮೃತದೇಹವನ್ನು ಕಂಡು ಕೊಟ್ಟಿಗೆಹಾರ ಅರಣ್ಯ ಚೆಕ್‌ಪೋಸ್ಟ್ಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!