February 4, 2026

ಮಡಿಕೇರಿ: ನಿವೃತ್ತ ಅರಣ್ಯಾಧಿಕಾರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

0
IMG-20230208-WA0038.jpg

ಮಡಿಕೇರಿ: ಕುಶಾಲನಗರ ತಾಲ್ಲೂಕಿನ ಬಸವನತ್ತೂರಿನಲ್ಲಿ ನಿವೃತ್ತ ಅರಣ್ಯಾಧಿಕಾರಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಟಿ.ವಿ. ಶಶಿ (80ವ) ಆತ್ಮಹತ್ಯೆಗೆ ಶರಣಾದವರು.

ತಮ್ಮ ಮನೆಯಲ್ಲೇ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿದದು, ಶಶಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಇನ್ನು ಟಿ.ವಿ. ಶಶಿ ಅವರಿಗೆ ನಿದ್ರಾ ಹೀನತೆ ಕಾಡುತ್ತಿತ್ತು. ತಮ್ಮ ಸಮಸ್ಯೆಗಳನ್ನು ಅವರು ಡೆತ್‌ ನೋಟ್‌ನಲ್ಲಿ ಬರೆದಿಟ್ಟಿದ್ದಾರೆ.

ಈ ಬಗ್ಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!