March 26, 2026

ಕಾಸರಗೋಡು: ಮನೆಯ ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದು ಪರಾರಿ

0
64cb6551-7b47-4343-95d4-1fe6a8304529.jpg

ಕಾಸರಗೋಡು: ಮಂಜೇಶ್ವರ ಹೊಸಂಗಡಿಯ ಅಂಗಡಿಪದವಿನಲ್ಲಿ ಮನೆಗೆ ನುಗ್ಗಿದ ಕಳ್ಳರು ಎಂಟು ಪವನ್ ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ.

ನಾಲ್ಕು ದಿನಗಳ ಹಿಂದೆ ಜಯಪಾಲ ಮತ್ತು ಕುಟುಂಬಸ್ಥರು ಕರ್ನಾಟಕಕ್ಕೆ ತೆರಳಿದ್ದರು. ಮಂಗಳವಾರ ಸಂಜೆ ಮರಳಿ ಬಂದಾಗ ಮನೆಯ ಬಾಗಿಲು ಮುರಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಇನ್ನು ಮಂಜೇಶ್ವರ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದಾಗ ಕಪಾಟಿನಲ್ಲಿರಿಸಲಾಗಿದ್ದ ಚಿನ್ನಾಭರಣ ಕಳವಾಗಿರುವುದು ಪತ್ತೆಯಾಗಿದೆ.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!