August 13, 2026

ಟ್ರ್ಯಾಕ್ಟರ್, ಕಾರು ಢಿಕ್ಕಿ: ಕಾರಿನಲ್ಲಿದ್ದ ಇಬ್ಬರು ಯುವಕರು ಮೃತ್ಯು

0
image_editor_output_image1558553872-1675932591765.jpg

ದಾವಣಗೆರೆ/ವಿಜಯಪುರ: ಟ್ರ್ಯಾಕ್ಟರ್ , ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಸಾವನಪ್ಪಿರುವ ದಾರುಣ ಘಟನೆ ದಾವಣಗೆರೆ ತಾಲೂಕಿನ ರಾಮಗೊಂಡನಹಳ್ಳಿ ಬಳಿ ತಡರಾತ್ರಿ ನಡೆದಿದೆ.

ಇನ್ನು ಕಾರಿನಲ್ಲಿದ್ದ ಇಬ್ಬರು ಸಾವನಪ್ಪಿದರೆ ಓರ್ವನಿಗೆ ಗಂಭೀರ ಗಾಯಗಳಾಗಿವೆ. ಬಿಲ್ಲಹಳ್ಳಿ ಮಂಜುನಾಥ (24), ಪಾಂಡೊಮಟ್ಟಿ ಅಮೃತ್ (23) ಸಾವನ್ನಪ್ಪಿದ ಯುವಕರು ಎಂದು ತಿಳಿದು ಬಂದಿದೆ.

ಓರ್ವನ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆ ಎಸ್ ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಯುವಕರು ದಾವಣಗೆರೆಯಲ್ಲಿ ಮದುವೆ ಮುಗಿಸಿಕೊಂಡು ಸ್ವಗ್ರಾಮ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿಗೆ ಕಾರಿನಲ್ಲಿ ತೆರಳುತ್ತಿದ್ದರು.

ಈ ವೇಳೆ, ರಾತ್ರಿ ಎದುರಿಗೆ ಬರುತ್ತಿದ್ದ ಟ್ರಾಕ್ಟರ್ಗೆ ಮೊದಲು ಕಾರು ಡಿಕ್ಕಿ ಹೊಡೆದಿದ್ದು ಬಳಿಕ ಎದುರು ಬರುತ್ತಿದ್ದ ಲಾರಿಗೆ ವಾಪಸ್ ಡಿಕ್ಕಿ ಹೊಡೆದಿದ್ದು, ಪರಿಣಾಮ ಸಂಪೂರ್ಣವಾಗಿ ಕಾರು ನಜ್ಜುಗುಜ್ಜಾಗಿದೆ.

ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!