August 13, 2026

ತೈಲ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಉಸಿರುಗಟ್ಟಿ 7 ಮಂದಿ ಕಾರ್ಮಿಕರು ಸಾವು

0
image_editor_output_image1763140549-1675932944749.jpg

ಕಾಕಿನಾಡ: ತೈಲ ಕಾರ್ಖಾನೆಯಲ್ಲಿ ತೈಲ ಸಂಗ್ರಹದ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಏಳು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ.

ಕಾಕಿನಾಡ ಜಿಲ್ಲೆಯ ಪೆದ್ದಾಪುರಂ ಮಂಡಲದ ಜಿ.ರಾಗಂಪೇಟೆಯಲ್ಲಿರುವ ಅಂಬಟಿ ಸುಬ್ಬಣ್ಣ ತೈಲ ಕಾರ್ಖಾನೆಯ ಆವರಣದಲ್ಲಿ ಈ ಘಟನೆ ನಡೆದಿದೆ.

ಕಾರ್ಮಿಕರು 24 ಅಡಿ ಆಳದ ತೈಲ ಟ್ಯಾಂಕರ್ ಅನ್ನು ಸ್ವಚ್ಛಗೊಳಿಸಲು ಒಬ್ಬೊಬ್ಬರಾಗಿ ಇಳಿದಿದ್ದರು. ಬಳಿಕ ಅಲ್ಲಿಯೇ ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ಮೃತರರು ಕೇವಲ 10 ದಿನಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದರು. ಇವರಲ್ಲಿ ಐವರು ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಪಾಡೇರು ನಿವಾಸಿಗಳಾಗಿದ್ದು, ಇಬ್ಬರು ಅದೇ ಮಂಡಲದ ಪುಲಿಮೇರು ಗ್ರಾಮದವರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!