August 13, 2026

ಕೇರಳದಲ್ಲಿ ವ್ಯಕ್ತಿಯೊಬ್ಬ ತನ್ನ ಚಿತೆ ತಾನೇ ಸಿದ್ದಪಡಿಸಿ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಶರಣು

0
DB-13012023-v_kumar.jpg

ಕೇರಳ: ವೃದ್ದನೊಬ್ಬ ತನ್ನ ಚಿತೆಗೆ ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರ ಘಟನೆ ಕೇರಳದ ಕೊಲ್ಲಂ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

ವಿಜಯಕುಮಾರ್ ( 68) ಆತ್ಮಹತ್ಯೆಗೆ ಶರಣಾದ ವೃದ್ದ. ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ದ ಕೆಲವು ದಿನಗಳಿಂದ ಕೆಲಸಕ್ಕೆ ತೆರಳಲು ಸಾಧ್ಯವಾಗದೇ ಮನೆಯಲ್ಲೇ ಇದ್ದರು. ಇದರಿಂದ ಮಾನಸಿಕವಾಗಿ ತೀವ್ರ ನೊಂದಿದ್ದರು. ಹೀಗಾಗಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೂ ಮುನ್ನ ತನಗೆಂದೇ ವೃದ್ದ ಚಿತೆಯನ್ನು ಸಿದ್ದಮಾಡಿಟ್ಟುಕೊಂಡಿದ್ದಾರೆ. ಬಳಿಕ ಅದಕ್ಕೆ ಬೆಂಕಿ ಹಚ್ಚಿ ಚಿತೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದಾಗಿ ಮುಂದೆ ನನಗೆ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಜೀವನವನ್ನು ಇಲ್ಲಿಗೇ ಕೊನೆಗೊಳಿಸುತ್ತೇನೆ ಎಂಬುದಾಗಿ ಸ್ನೇಹಿತನನ್ನು ಉದ್ದೇಶಿಸಿ ವೃದ್ದ ಪತ್ರ ಬರೆದಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!