ಮಂಗಳೂರು: ಕದ್ರಿ ಪಾರ್ಕ್ ಗೆ ಬಂದಿದ್ದ ಜೋಡಿಗೆ ಹಲ್ಲೆ, ಸಂಘಪರಿವಾರದ ಕಾರ್ಯಕರ್ತರ ಬಂಧನ
ಮಂಗಳೂರು: ಕದ್ರಿ ಪಾರ್ಕ್ ಗೆ ಬಂದಿದ್ದ ಜೋಡಿಗೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ವರದಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಅನ್ಯ ಸಮುದಾಯದ ಯುವಕ ಯುವತಿ ನಗರದ ಕದ್ರಿ ಪಾರ್ಕ್ ಗೆ ಆಗಮಿಸಿತ್ತು ಎಂದು ವರದಿಯಾಗಿದೆ.
ಇದನ್ನು ಗಮನಿಸಿದ ಸಂಘಪರಿವಾರ ಅವರನ್ನು ಪ್ರಶ್ನಿಸಿ ಹಲ್ಲೆ ನಡೆಸಿದೆ ಎಂದು ತಿಳಿದುಬಂದಿದೆ. ಉತ್ತರ ಕರ್ನಾಟಕ ಮೂಲದ ಅನ್ಯಕೋಮಿನ ಜೋಡಿ ಕದ್ರಿ ಪಾರ್ಕ್ ಗೆ ಬಂದಿದ್ದು, ಇದನ್ನು ಪ್ರಶ್ನಿಸಿ ಸಂಘಟನೆ ಹಲ್ಲೆ ನಡೆಸಿದೆ.
ಹಲ್ಲೆ ನಡೆಸಿದ ಬಳಿಕ ಜೋಡಿಯನ್ನು ಕದ್ರಿ ಠಾಣಾ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣದ ವಿಚಾರಣೆ ನಡೆಸಿದ ಕದ್ರಿ ಠಾಣಾ ಪೊಲೀಸರು ಜೋಡಿಗೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.




